ADVERTISEMENT

ಸಂಸದೀಯ ಪಕ್ಷದ ನಾಯಕ ಸ್ಥಾನದಿಂದ ಚಿರಾಗ್‌ ಪಾಸ್ವಾನ್‌ರನ್ನು ತೆಗೆದುಹಾಕಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 4:05 IST
Last Updated 14 ಜೂನ್ 2021, 4:05 IST
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್    

ನವದೆಹಲಿ: ಕಳೆದ ವರ್ಷ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಮತ್ತೊಂದು ಸಂಕಷ್ಟ ಎದುರಾಗಿದೆ.

ಲೋಕಸಭೆಯಲ್ಲಿ ಸಂಸದೀಯ ಪಕ್ಷದ ನಾಯಕ ಸ್ಥಾನದಿಂದ ಚಿರಾಗ್‌ ಪಾಸ್ವಾನ್‌ ಅವರನ್ನು ತೆಗೆದುಹಾಕಲು ಎಲ್‌ಜೆಪಿಯ ಆರು ಸಂಸದರಲ್ಲಿ ಐವರು ನಿರ್ಧರಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಚಿರಾಗ್‌ ಪಾಸ್ವಾನ್‌ ಅವರ ಸ್ಥಾನಕ್ಕೆ ಹಾಜಿಪುರ ಸಂಸದ ಪಶುಪತಿ ಕುಮಾರ್‌ ಪಾರಸ್‌ ಅವರನ್ನು ಆಯ್ಕೆ ಮಾಡುವ ತೀರ್ಮಾನವನ್ನು ಎಲ್‌ಜೆಪಿ ಸಂಸದರು ತೆಗೆದುಕೊಂಡಿದ್ದಾರೆ.

ADVERTISEMENT

ಈ ಹೊಸ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಲೋಕಸಭಾ ಸ್ವೀಕರ್‌ ಓಂ ಬಿರ್ಲಾ ಅವರನ್ನು ಭೇಟಿ ಮಾಡಿರುವ ಎಲ್‌ಜೆಪಿ ಸಂಸದರು ಪತ್ರವೊಂದನ್ನು ಸಲ್ಲಿಸಿದ್ದಾರೆ ಎಂದು ಎಎನ್‌ಐ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.