ADVERTISEMENT

ವಿಮಾನ ನಿಲ್ದಾಣ ಭದ್ರತೆಗೆ ಸ್ಥಳೀಯ ಭಾಷೆ ಬಲ್ಲವರ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 19:31 IST
Last Updated 12 ಆಗಸ್ಟ್ 2020, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ಸ್ಥಳೀಯ ಭಾಷೆ ಅಥವಾ ಇಂಗ್ಲಿಷ್‌ನ ಪ್ರಾಥಮಿಕ ಜ್ಞಾನ ಇರುವವರನ್ನೇ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಪರ್ಕಕ್ಕೆ ಬರುವ ಸ್ಥಳಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಸಾಧ್ಯವಿರುವಷ್ಟರ ಮಟ್ಟಿಗೆ ನಿಯೋಜಿಸಲಾಗುವುದು ಎಂದುಭಾರತದ ವಿಮಾನ ನಿಲ್ದಾಣಗಳ ಭದ್ರತೆಯ ಹೊಣೆ ಹೊತ್ತಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಲ್ಲ ವಿಮಾನ ನಿಲ್ದಾಣಗಳಲ್ಲಿಯೂ ಸ್ಥಳೀಯ ಭಾಷೆ ಬಲ್ಲವರನ್ನು ನೂರರಷ್ಟು ನಿಯೋಜಿಸುವುದು ಸಾಧ್ಯವಾಗದು ಎಂದೂ ಅವರು ತಿಳಿಸಿದ್ದಾರೆ.

‘ಹಿಂದಿ ಗೊತ್ತಿಲ್ಲದ ನೀವು ಭಾರತೀಯರೇ’ ಎಂದು ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ಚೆನ್ನೈ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯೊಬ್ಬರು ಕೆಲ ದಿನಗಳ ಹಿಂದೆ ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.