ADVERTISEMENT

ಹೆಚ್ಚಿದ ಕೌಟುಂಬಿಕ ಹಿಂಸೆ: ಕಾಯ್ದೆಯ ಸಮರ್ಪಕ ಜಾರಿಗೆ ದೆಹಲಿ ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 9:48 IST
Last Updated 27 ಏಪ್ರಿಲ್ 2020, 9:48 IST
   

ನವದೆಹಲಿ:ಕೋವಿಡ್‌-19 ಹಿನ್ನೆಲೆಯಲ್ಲಿ ವಿಧಿಲಾಗಿರುವ ಲಾಕ್‌ಡೌನ್‌ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿರುವುದರ ಬಗ್ಗೆ ದೆಹಲಿ ಹೈಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ಹಿನ್ನೆಲಲ್ಲಿ ಲಾಕ್‌ಡೌನ್‌ ಸಂದರ್ಭ ಕೌಟುಂಬಿಕ ಹಿಂಸೆಗೆ ಸಂಬಂಧಿಸಿದ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ದೆಹಲಿ ಹೈಕೋರ್ಟ್‌ ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಮತ್ತು ನ್ಯಾಯಮೂರ್ತಿ ಸಿ.ಹರಿಶಂಕರ್‌ ಅವರನ್ನು ಒಳಗೊಂಡ ಪೀಠವು ಕೌಟುಂಬಿಕ ಹಿಂಸೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ವಿಚಾರಣೆ ನಡೆಸಿದೆ.

ADVERTISEMENT

ಸಹಾಯವಾಣಿ ಮತ್ತು ವಾಟ್ಸಾಪ್‌ ಸಂಖ್ಯೆಗಳ ಮೂಲಕ ಸಂತಸ್ತ್ರರಿಗೆ ಶೀಘ್ರವಾಗಿ ದೂರು ನೀಡಲು ಸಹಾಯವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತ ಕ್ರಮಕೈಗೊಳ್ಳಬೇಕು ಎಂದು ದೆಹಲಿ ಮುಖ್ಯ ನ್ಯಾಯಾಲಯ ಆದೇಶಿಸಿದೆ.

ಲಾಕ್‌ಡೌನ್ ಸಮಯದಲ್ಲಿ ಕೌಟುಂಬಿಕ ಹಿಂಸೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಒಳಗಾದವರನ್ನು ರಕ್ಷಿಸುವಂತೆ ಕೋರಿ ಎನ್‌ಜಿಒ ಒಂದು ಸಲ್ಲಿಸಿದ್ದ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಲಯ ವಿಚಾರಣೆ ನಡೆಸಿದೆ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.