ADVERTISEMENT

ಕೋವಿಡ್‌-19: ಉತ್ತರ ಪ್ರದೇಶದಲ್ಲಿ ಮೇ 17ರ ವರೆಗೆ ಲಾಕ್‌ಡೌನ್‌ ವಿಸ್ತರಣೆ

ಪಿಟಿಐ
Published 9 ಮೇ 2021, 11:24 IST
Last Updated 9 ಮೇ 2021, 11:24 IST
ಕೊರೊನಾ ವೈರಸ್‌
ಕೊರೊನಾ ವೈರಸ್‌   

ಲಖನೌ: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ಅನ್ನು ಮೇ 17ರ ವರೆಗೆ ವಿಸ್ತರಿಸಿ ಉತ್ತರ ಪ್ರದೇಶ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.

ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್‌ ಮೇ 10ರಂದು ಬೆಳಿಗ್ಗೆ 7ಕ್ಕೆ ಮುಕ್ತಾಯಗೊಳ್ಳುವುದು. ಹೀಗಾಗಿ, ಮೇ 17ರ ಬೆಳಿಗ್ಗೆ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿ ಆದೇಶಿಸಲಾಗಿದೆ ಎಂದು ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ (ಮಾಹಿತಿ) ನವನೀತ್‌ ಸೆಹಗಲ್‌ ತಿಳಿಸಿದ್ದಾರೆ.

‘ಲಾಕ್‌ಡೌನ್‌ ಜಾರಿ ಮಾಡಿರುವುದು ಕೊರೊನಾ ಸೋಂಕು ಸರಪಳಿಯನ್ನು ತುಂಡರಿಸಲು ಸಹಕಾರಿಯಾಗಿದೆ. ಕೆಲದಿನಗಳಿಂದ ಕೋವಿಡ್‌ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿರುವುದರಿಂದ ಲಾಕ್‌ಡೌನ್‌ ವಿಸ್ತರಿಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದ್ದಾರೆ.

ಲಸಿಕೆ ಕಾರ್ಯಕ್ರಮ, ಕೈಗಾರಿಕೆ ಹಾಗೂ ವೈದ್ಯಕೀಯ ಸೇವೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.