ADVERTISEMENT

ತಮಿಳುನಾಡು ಸಂಪೂರ್ಣ ಲಾಕ್‌ಡೌನ್: ಜಿಲ್ಲಾ ಗಡಿಗಳು ಬಂದ್‌

ಪಿಟಿಐ
Published 23 ಮಾರ್ಚ್ 2020, 11:53 IST
Last Updated 23 ಮಾರ್ಚ್ 2020, 11:53 IST
ಬಸ್ ಸೋಂಕು ಮುಕ್ತಗೊಳಿಸಲು ತಮಿಳುನಾಡು ಸರ್ಕಾರ ಕ್ರಮ ತೆಗೆದುಕೊಂಡಿದೆ.
ಬಸ್ ಸೋಂಕು ಮುಕ್ತಗೊಳಿಸಲು ತಮಿಳುನಾಡು ಸರ್ಕಾರ ಕ್ರಮ ತೆಗೆದುಕೊಂಡಿದೆ.   

ಚೆನ್ನೈ: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ತಮಿಳುನಾಡು ಸರ್ಕಾರವು ರಾಜ್ಯವ್ಯಾಪಿ 144ನೇ ವಿಧಿಯನ್ವಯ ನಿಷೇಧಾಜ್ಞೆ ಜಾರಿ ಮಾಡಲು ನಿರ್ಧರಿಸಿದೆ.

ನಾಳೆ ಸಂಜೆ (ಮಾರ್ಚ್ 24) 6 ಗಂಟೆಯಿಂದ ಮಾರ್ಚ್ 31ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘೋಷಿಸಿದರು.

ವಿಧಾನಸಭೆಯಲ್ಲಿ ಇಂದು (ಮಾರ್ಚ್ 23, ಸೋಮವಾರ) ಈ ಕುರಿತು ಹೇಳಿಕೆ ನೀಡಿದ ಅವರು, ಅತಿಮುಖ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.

ADVERTISEMENT

ನಿಷೇಧಾಜ್ಞೆ ಜಾರಿಯಿರುವ ಅವಧಿಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಾರಿಗೆಗಳನ್ನೂ ನಿರ್ಬಂಧಿಸಲಾಗುವುದು. ತಮಿಳುನಾಡಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 9ಕ್ಕೇರಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ತುರ್ತುಕ್ರಮ ತೆಗೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.