ADVERTISEMENT

ಪಶ್ಚಿಮ ಬಂಗಾಳ | ಆಗಸ್ಟ್ 31ರ ವರೆಗೂ ವಾರಕ್ಕೆ ಎರಡು ದಿನ ಲಾಕ್‌ಡೌನ್: ಸಿಎಂ ಮಮತಾ

ಏಜೆನ್ಸೀಸ್
Published 28 ಜುಲೈ 2020, 11:48 IST
Last Updated 28 ಜುಲೈ 2020, 11:48 IST
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಾರಕ್ಕೆ ಎರಡು ದಿನಗಳ ಲಾಕ್‌ಡೌನ್‌ ಆಗಸ್ಟ್‌ 31ರ ವರೆಗೂ ಮುಂದುವರಿಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಆಗಸ್ಟ್‌ 1ರಂದು ಬಕ್ರಿದ್ ಪ್ರಯುಕ್ತ ರಾಜ್ಯದಲ್ಲಿ ಲಾಕ್‌ಡೌನ್‌ ಇರುವುದಿಲ್ಲ ಎಂದು ಮಂಗಳವಾರ ಪ್ರಕಟಿಸಿದ್ದಾರೆ.

ಆಗಸ್ಟ್‌ 2, 5, 8, 9, 16, 17, 23, 24 ಹಾಗೂ 31ರಂದು ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ.

ADVERTISEMENT

ಕೋಲ್ಕತ್ತ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ. ಬಹುತೇಕ ಸರ್ಕಾರಿ, ಖಾಸಗಿ ಕಚೇರಿಗಳು ಮುಚ್ಚಿರಲಿವೆ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಸೌಲಭ್ಯ ಇರುವುದಿಲ್ಲ.

ಅಂತರರಾಜ್ಯ ಹಾಗೂ ರಾಜ್ಯದೊಳಗೆ ಸರಕು ಸಾಗಣೆ, ಅತ್ಯಗತ್ಯ ಸೇವೆಗಳು, ಕೃಷಿ ಚಟುವಟಿಕೆಗಳು ಮುಂದುವರಿಯಲಿವೆ. ಜುಲೈ 29ರಂದು ಪಶ್ಚಿಮ ಬಂಗಾಳದಲ್ಲಿ ಪೂರ್ಣ ಲಾಕ್‌ಡೌನ್‌ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.