ಪುಣೆ: ಲಾಕ್‌ಡೌನ್ ಉಲ್ಲಂಘಿಸಿ ಬೆಳ್ಳಂ ಬೆಳಿಗ್ಗೆ ವಾಯುವಿಹಾರಕ್ಕೆ ಬಂದವರಿಗೆ ಪೊಲೀಸರು ರಸ್ತೆಯಲ್ಲೇ ಶಿಕ್ಷೆ 'ಯೋಗ' ನೀಡಿದರು.
ಇಲ್ಲಿನ ಬಿಬ್ವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಸಾಮಾಜಿಕ ಅಂತರವನ್ನು ಪಾಲಿಸದೇ ವಾಕಿಂಗ್ ಮಾಡುತ್ತಿದ್ದವರಿಗೆ ಪೊಲೀಸರು ಯೋಗ ಶಿಕ್ಷೆ ಕೊಟ್ಟಿದ್ದಾರೆ. ಮಹಿಳೆಯರು ಸೇರಿದಂತೆ ನೂರಾರು ಜನರನ್ನು ರಸ್ತೆಯಲ್ಲೇ ನಿಲ್ಲಿಸಿ ಯೋಗ ಮಾಡಿಸಿದ್ದಾರೆ.
ದೇಶದಾದ್ಯಂತ ಲಾಕ್‌ಡೌನ್ ಉಲ್ಲಂಘಿಸಿ ಬರುವವರಿಗೆ ಪೊಲೀಸರು ಆರತಿ ಮಾಡುವುದು, ಮೆರವಣಿಗೆ ಮಾಡುವುದು ಸೇರಿದಂತೆ ಜಾಗೃತಿ ಮೂಡಿಸಲು ವಿನೂತನ ಪ್ರಯೋಗಗಳನ್ನು ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.