ADVERTISEMENT

ಲೋಕಸಭೆಯಲ್ಲಿ ಪ್ರತಿಪಕ್ಷಗಳಿಂದ ಗದ್ದಲ: ಮಧ್ಯಾಹ್ನ 2ರವರೆಗೆ ಕಲಾಪ ಮುಂದೂಡಿಕೆ

ಪಿಟಿಐ
Published 20 ಜುಲೈ 2021, 6:24 IST
Last Updated 20 ಜುಲೈ 2021, 6:24 IST
ಓಂ ಬಿರ್ಲಾ
ಓಂ ಬಿರ್ಲಾ   

ನವದೆಹಲಿ: ಪೆಗಾಸಸ್‌ ಗೂಢಚರ್ಯೆ ಪ್ರಕರಣ ಲೋಕಸಭೆಯಲ್ಲಿ ಮಂಗಳವಾರವೂ ಪ್ರತಿಧ್ವನಿಸಿದ್ದು, ವಿರೋಧ ಪಕ್ಷಗಳ ಸದಸ್ಯರ ಗದ್ದಲದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2ರ ವರೆಗೆ ಮುಂದೂಡಲಾಯಿತು.

ಬೆಳಿಗ್ಗೆ ಕಲಾಪ ಆರಂಭಗೊಳ್ಳುತ್ತಿರುವಂತೆಯೇ ಪೆಗಾಸಸ್‌ ಗೂಢಚರ್ಯೆ ಪ್ರಕರಣ ಹಾಗೂ ಇತರ ವಿಷಯಗಳನ್ನು ಪ್ರಸ್ತಾಪಿಸಿದ ವಿರೋಧ ಪಕ್ಷಗಳ ಸದಸ್ಯರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೀಗಾಗಿ ಸ್ಪೀಕರ್‌ ಓಂ ಬಿರ್ಲಾ ಅವರು ಕಲಾಪವನ್ನು ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT