ನವದೆಹಲಿ: ಲೋಕಸಭೆಯಲ್ಲಿ ಶುಕ್ರವಾರವೂ ವಿರೋಧ ಪಕ್ಷದ ಸದಸ್ಯರು ಪೆಗಾಸಸ್ ಸೇರಿದಂತೆ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಭಟಿಸಿದರು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.
ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಯನ್ನು ಆರಂಭಿಸಿದರು. ಆದರೆ ಈ ನಡುವೆ ವಿರೋಧ ಪಕ್ಷದ ಸದಸ್ಯರು ಪೆಗಾಸಸ್ ಮತ್ತು ನೂತನ ಕೃಷಿ ಕಾಯ್ದೆಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸ್ಪೀಕರ್ ಅವರು ಮಾಡಿದ ಮನವಿಗೂ ಸ್ಪಂದಿಸದ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ಮುಂದುವರಿಸಿದರು. ಬಳಿಕ ಸ್ಪೀಕರ್, ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.