ADVERTISEMENT

ಲೋಕಸಭೆಯ ಉಪಾಧ್ಯಕ್ಷರ ಆಯ್ಕೆ: ಪ್ರಧಾನಿ ಮೋದಿಗೆ ಖರ್ಗೆ ಪತ್ರ

ಪಿಟಿಐ
Published 10 ಜೂನ್ 2025, 9:35 IST
Last Updated 10 ಜೂನ್ 2025, 9:35 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ</p></div>

ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ

   

– ಪಿಟಿಐ ಚಿತ್ರ

ನವದೆಹಲಿ: ಲೋಕಸಭೆ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ADVERTISEMENT

‘ಈ ಸ್ಥಾನ ಖಾಲಿ ಬಿಡುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದುವುದಿಲ್ಲ ಮತ್ತು ಸಂವಿಧಾನದ ನಿಯಮಗಳ ಉಲ್ಲಂಘನೆ ಆಗಲಿದೆ’ ಎಂದು ಖರ್ಗೆ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

‘ಸಂವಿಧಾದ ವಿಧಿ 93ರಂತೆ ಲೋಕಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಕಡ್ಡಾಯ. ಸಂವಿಧಾನಾತ್ಮಕವಾಗಿ ಉಪಾಧ್ಯಕ್ಷರ ಸ್ಥಾನವು ಸದನದಲ್ಲಿಯೇ ಎರಡನೇ ಅತಿದೊಡ್ಡ ಸ್ಥಾನವಾಗಿದೆ’ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಲೋಕಸಭೆಯ ಎರಡನೇ ಅಥವಾ ಮೂರನೇ ಅಧಿವೇಶನದಲ್ಲಿಯೇ ಈ ಸ್ಥಾನಕ್ಕಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು. 1ರಿಂದ 16ನೇ ಲೋಕಸಭೆವರೆಗೆ ಪ್ರತಿ ಸದನದಲ್ಲಿಯೇ ಉಪಾಧ್ಯಕ್ಷ ಸ್ಥಾನ ಭರ್ತಿಯಾಗಿತ್ತು ಎಂದೂ ಅವರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.