ADVERTISEMENT

2024ರಲ್ಲಿ ದಿಲ್ಲಿಯಲ್ಲಿ ಸರ್ಕಾರ ರಚಿಸುತ್ತೇವೆ: ಮಮತಾ ಸಹೋದರ ಕಾರ್ತಿಕ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2021, 9:46 IST
Last Updated 3 ಅಕ್ಟೋಬರ್ 2021, 9:46 IST
ಟಿಎಂಸಿ ಬೆಂಬಲಿಗರ ಸಂಭ್ರಮ
ಟಿಎಂಸಿ ಬೆಂಬಲಿಗರ ಸಂಭ್ರಮ   

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬೇರೆ ಯಾವುದೇ ಪಕ್ಷಕ್ಕೆ ನೆಲೆಯಿಲ್ಲ. ಪಕ್ಷ ಮತ್ತು ದೀದಿ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. 2024ರಲ್ಲಿ ದೆಹಲಿಯಲ್ಲಿ ನಾವು ಸರ್ಕಾರ ರಚಿಸುತ್ತೇವೆ ಎಂದು ಮುಖ್ಯಮಂತ್ರಿಮಮತಾ ಬ್ಯಾನರ್ಜಿ ಅವರ ಸಹೋದರ ಕಾರ್ತಿಕ್‌ ಬ್ಯಾನರ್ಜಿ ತಿಳಿಸಿದ್ದಾರೆ.

ಭವಾನಿಪುರ ಉಪಚುನಾವಣೆ ಫಲಿತಾಂಶ ಬಂದ ಬಳಿಕ ಪ್ರತಿಕ್ರಿಯಿಸಿರುವ ಕಾರ್ತಿಕ್‌, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವುದಾಗಿ 'ಎಎನ್ಐ' ವರದಿ ಮಾಡಿದೆ.

ಭವಾನಿಪುರ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್‌ ವಿರುದ್ಧ 58 ಸಾವಿರ ಮತಗಳ ಅಂತರದಿಂದ ಜಯಗಳಿಸಿದರು. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಎದುರಾಗಿದ್ದ ತೊಡಕನ್ನು ನಿವಾರಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.