ADVERTISEMENT

ಸಂಸದರ ವೇತನ ಕಡಿತ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 14:42 IST
Last Updated 15 ಸೆಪ್ಟೆಂಬರ್ 2020, 14:42 IST
ಸಂಸತ್ ಭವನ
ಸಂಸತ್ ಭವನ   

ನವದೆಹಲಿ: ‘ಕೋವಿಡ್–19ರಿಂದ ಉದ್ಭವಿಸಿರುವ ಅಗತ್ಯಗಳಿಗೆ ಭರಿಸಲು ಸಂಸದರ ವೇತನದಲ್ಲಿ ಶೇ 30ರಷ್ಟು ಕಡಿತಕ್ಕೆ ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.

ಈ ಮಸೂದೆಯು ಸಂಸದರ ಸಂಬಳ, ಭತ್ಯೆ ಮತ್ತು ಪಿಂಚಣಿ (ತಿದ್ದುಪಡಿ) ಸುಗ್ರೀವಾಜ್ಞೆ, 2020 ಅನ್ನು ಬದಲಾಯಿಸುತ್ತದೆ. ಸಂಪುಟ ಅನುಮೋದನೆಯ ಬಳಿಕ ಏಪ್ರಿಲ್ 6ರಂದು ಸುಗ್ರೀವಾಜ್ಞೆ ಹೊರಡಿಸಲಾಗಿತ್ತು.

ಸಂಸದರ ವೇತನ, ಭತ್ಯೆ ಮತ್ತು ಪಿಂಚಣಿ (ತಿದ್ದುಪಡಿ) ಮಸೂದೆ 2020ಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಸೋಮವಾರ ಮಂಡನೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT