ADVERTISEMENT

ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಕಾಯ್ದೆ ಅಂಗೀಕಾರ

ಪಿಟಿಐ
Published 2 ಆಗಸ್ಟ್ 2022, 15:47 IST
Last Updated 2 ಆಗಸ್ಟ್ 2022, 15:47 IST

ನವದೆಹಲಿ (ಪಿಟಿಐ): ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಕಾಯ್ದೆ–2021 ಅನ್ನುಲೋಕಸಭೆಯಲ್ಲಿ ಮಂಗಳವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಕಾಯ್ದೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಕೇಂದ್ರ ಪರಿಸರ ಸಚಿವ ಭೂಪೇಂದರ್‌ ಯಾದವ್‌, ‘ವನ್ಯಜೀವಿಗಳ ಉತ್ಪನ್ನಗಳಿಂದ ತಯಾರಿಸಲಾಗುವ ಶಾಲು ಹಾಗೂ ಸೌಂದರ್ಯವರ್ಧಕ ವಸ್ತುಗಳನ್ನು ಬಹಿಷ್ಕರಿಸುವಂತೆ ಜನರಲ್ಲಿ ಅರಿವು ಮೂಡಿಸಬೇಕು. ಆ ಮೂಲಕ ವನ್ಯ ಪ್ರಾಣಿಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT