ADVERTISEMENT

ಲೋಕಸಭೆ ಚುನಾವಣೆ: ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಬಿಜೆಪಿಗೆ ಸೇರ್ಪಡೆ

ಪಿಟಿಐ
Published 11 ಮಾರ್ಚ್ 2024, 8:04 IST
Last Updated 11 ಮಾರ್ಚ್ 2024, 8:04 IST
<div class="paragraphs"><p>ಕೆ. ಅಣ್ಣಾಮಲೈ ಮತ್ತು ರಜನಿಕಾಂತ್</p></div>

ಕೆ. ಅಣ್ಣಾಮಲೈ ಮತ್ತು ರಜನಿಕಾಂತ್

   

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳ ಸಂಘದ ಕೆಲವು ಸದಸ್ಯರು ಇಂದು (ಸೋಮವಾರ) ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ADVERTISEMENT

ಅಣ್ಣಾಮಲೈ ಮತ್ತು ಪಕ್ಷದ ಹಿರಿಯ ನಾಯಕ ಎಚ್. ರಾಜಾ ಅವರು ರಜನಿಕಾಂತ್ ಅಭಿಮಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.