ADVERTISEMENT

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾಗೆ ಕೋವಿಡ್‌ ದೃಢ: ಏಮ್ಸ್‌ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 10:49 IST
Last Updated 21 ಮಾರ್ಚ್ 2021, 10:49 IST
ಓಂ ಬಿರ್ಲಾ
ಓಂ ಬಿರ್ಲಾ   

ನವದೆಹಲಿ:ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದ್ದು, ಅವರನ್ನು ಶನಿವಾರ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಓಂ ಬಿರ್ಲಾ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಏಮ್ಸ್‌ ಆಸ್ಪತ್ರೆಯು ಭಾನುವಾರ ಹೇಳಿಕೆ ಬಿಡುಗಡೆ ಮಾಡಿದೆ.

‘ಮಾರ್ಚ್‌ 19ರಂದು ಬಿರ್ಲಾ ಅವರಲ್ಲಿ ಕೋವಿಡ್‌ ದೃಢಪಟ್ಟಿತ್ತು. ಇದರ ಮರುದಿನವೇ ಅವರ ಆರೋಗ್ಯದ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಅವರನ್ನು ಏಮ್ಸ್‌ ಕೋವಿಡ್‌ ಕೇಂದ್ರಕ್ಕೆ ದಾಖಲಿಸಲಾಯಿತು’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.