ADVERTISEMENT

ಲೋಕಸಭೆ: ಗದ್ದಲದ ನಡುವೆಯೇ ಪ್ರಶ್ನೋತ್ತರ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 15:52 IST
Last Updated 11 ಫೆಬ್ರುವರಿ 2026, 15:52 IST
<div class="paragraphs"><p>ಪ್ರಲ್ಹಾದ ಜೋಶಿ</p></div>

ಪ್ರಲ್ಹಾದ ಜೋಶಿ

   

ನವದೆಹಲಿ: ವಿರೋಧ ಪಕ್ಷಗಳ ಸದಸ್ಯರ ಗದ್ದಲ, ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪ ಬುಧವಾರ ನಡೆಯಿತು.

ಪ್ರಶ್ನೋತ್ತರದ ಅವಧಿಯಲ್ಲಿ 13 ಪ್ರಶ್ನೆಗಳು ಹಾಗೂ ಅವುಗಳಿಗೆ ಪೂರಕವಾದ ಉಪ ಪ್ರಶ್ನೆಗಳನ್ನು ಕೇಳಲಾಯಿತು.

ADVERTISEMENT

ಪ್ರಶ್ನೋತ್ತರ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಅಡ್ಡಿಪಡಿಸಲು ಮುಂದಾದರು. ಸ್ಪೀಕರ್ ಸ್ಥಾನದಲ್ಲಿದ್ದ ಪಿ.ಸಿ. ಮೋಹನ್ ಅವರು ಅವಕಾಶ ನೀಡಲಿಲ್ಲ.

ವಿಪಕ್ಷಗಳ ಕೆಲವು ಸದಸ್ಯರು ‘ನಮಗೆ ನ್ಯಾಯ ಬೇಕು’ ಎಂದು ಘೋಷಣೆ ಹಾಕಿದರು. ಪ್ರತಿಭಟನೆ ಬಳಿಕ ಬೆಳಿಗ್ಗೆ 11.30ರ ಸುಮಾರಿಗೆ ಸದನದಿಂದ ಹೊರನಡೆದರು.

ಕೇಂದ್ರ ಬಜೆಟ್‌ ಕುರಿತ ಚರ್ಚೆಗಳು ಮಂಗಳವಾರದಿಂದ ಪುನರಾರಂಭಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.