ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ದೂರದಾರರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಜನವರಿ 28ರಂದು ಮೌಖಿಕ ವಿಚಾರಣೆಗೆ ಹಾಜರಾಗುವಂತೆ ಲೋಕಪಾಲ್ ಕರೆದಿದೆ.
ಭ್ರಷ್ಟಾಚರಕ್ಕೆ ಸಂಬಂಧಿಸಿದಂತೆ ಸೆಬಿ ಮುಖ್ಯಸ್ಥರ ವಿರುದ್ಧ ಮೊಯಿತ್ರಾ ಮತ್ತು ಇತರ ಇಬ್ಬರು ದೂರು ನೀಡಿದ್ದರು. ಮಾಧವಿ ಪುರಿ ಬುಚ್ ವಿರುದ್ಧ ಹಿಂಡೆನ್‌ಬರ್ಗ್ ಸಂಸ್ಥೆ ನೀಡಿದ ವರದಿಯನ್ನು ಆಧರಿಸಿ ಅವರು ದೂರು ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.