ADVERTISEMENT

ಭ್ರಷ್ಟಾಚಾರದ ಕುರಿತು ಲೋಕಪಾಲಕ್ಕೆ ಈ ವರ್ಷ 1,719 ದೂರು

ಪಿಟಿಐ
Published 19 ಸೆಪ್ಟೆಂಬರ್ 2022, 11:35 IST
Last Updated 19 ಸೆಪ್ಟೆಂಬರ್ 2022, 11:35 IST
ಲೋಕಪಾಲ
ಲೋಕಪಾಲ   

ನವದೆಹಲಿ: ಭ್ರಷ್ಟಾಚಾರಕ್ಕೆ ಸಂಬಂಧಿಸಿದ 1,719 ದೂರುಗಳು ಈ ವರ್ಷ ಇದುವರೆಗೆ ಲೋಕಪಾಲದಲ್ಲಿ ದಾಖಲಾಗಿದ್ದು, ಇವುಗಳಲ್ಲಿ 136 ಪ್ರಕರಣಗಳನ್ನು ತನಿಖೆಗೆ ಕೈಗೆತ್ತಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

2022–23ರ ಸಾಲಿನಲ್ಲಿ (2022 ಆಗಸ್ಟ್‌ 21ರ ವರೆಗೆ) ಒಟ್ಟು ದೂರುಗಳ ಪೈಕಿ 134 ದೂರುಗಳು ಮಾತ್ರ ನಿಗದಿತ ನಮೂನೆಯಲ್ಲಿ ಸಲ್ಲಿಕೆಯಾಗಿವೆ. ಉಳಿದ 1,585 ದೂರುಗಳು ನಿಗದಿತ ನಮೂನೆಯಲ್ಲಿ ಸಲ್ಲಿಕೆಯಾಗಿಲ್ಲ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಲೋಕಪಾಲ ಕಚೇರಿ ಮೂಲಗಳು ತಿಳಿಸಿವೆ.

ನಿಗದಿತ ನಮೂನೆಯಲ್ಲಿ ಸಲ್ಲಿಸಿದ್ದ 133 ದೂರುಗಳನ್ನು ಮತ್ತು ನಿಗದಿತ ನಮೂನೆಯಲ್ಲಿ ಸಲ್ಲಿಸದ ಮೂರು ದೂರುಗಳನ್ನು ತನಿಖೆಗೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.