ADVERTISEMENT

ಭ್ರಷ್ಟಾಚಾರ ಪ್ರಕರಣ: ವಕೀಲ ದೆಹಾದ್ರಾಯ್‌ಗೆ ವಿಚಾರಣೆಗೆ ಹಾಜರಾಗಲು ಸಿಬಿಐ ಸೂಚನೆ

ಪಿಟಿಐ
Published 23 ಜನವರಿ 2024, 13:08 IST
Last Updated 23 ಜನವರಿ 2024, 13:08 IST
ಸಿಬಿಐ
ಸಿಬಿಐ   

ನವದೆಹಲಿ: ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯ ಭಾಗವಾಗಿ ಗುರುವಾರ ವಿಚಾರಣೆಗೆ ಹಾಜರಾಗುವಂತೆ ವಕೀಲ ಜೈ ಅನಂತ್‌ ದೆಹಾದ್ರಾಯ್ ಅವರಿಗೆ ಸಿಬಿಐ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹದ್ರಾಯ್‌ ಅವರು ಮಹುವಾ ಅವರ ನಿಕಟವರ್ತಿಯಾಗಿದ್ದರು. ಬಳಿಕ ಅವರು ಮಹುವಾ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. 

ಮಹುವಾ ಅವರು ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಹಣ ಹಾಗೂ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಪಾಲದಲ್ಲಿ ದೂರು ದಾಖಲಿಸಿದ್ದರು. ಲೋಕಪಾಲರ ಶಿಫಾರಸಿನ ಅನ್ವಯ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ನೀತಿ ಸಮಿತಿಯ ವರದಿ ಆಧರಿಸಿ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. ಇದನ್ನು ಪ್ರಶ್ನಿಸಿ ಮಹುವಾ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.