ADVERTISEMENT

LS Election: ತಮಿಳುನಾಡು, ಪುದುಚೇರಿ ಸೇರಿ ಕಾಂಗ್ರೆಸ್‌ಗೆ 10 ಕ್ಷೇತ್ರ: DMK

ಪಿಟಿಐ
Published 9 ಮಾರ್ಚ್ 2024, 14:53 IST
Last Updated 9 ಮಾರ್ಚ್ 2024, 14:53 IST
<div class="paragraphs"><p>ಚೆನ್ನೈನಲ್ಲಿ ನಡೆದ ಸೀಟು ಹಂಚಿಕೆ ಸಭೆಯ ನಂತರ ಕೆ.ಸಿ.ವೇಣುಗೋಪಾಲ್ ಹಾಗೂ ಎಂ.ಕೆ.ಸ್ಟಾಲಿನ್ ಅವರು ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು</p></div>

ಚೆನ್ನೈನಲ್ಲಿ ನಡೆದ ಸೀಟು ಹಂಚಿಕೆ ಸಭೆಯ ನಂತರ ಕೆ.ಸಿ.ವೇಣುಗೋಪಾಲ್ ಹಾಗೂ ಎಂ.ಕೆ.ಸ್ಟಾಲಿನ್ ಅವರು ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು

   

ಪಿಟಿಐ ಚಿತ್ರ

ಚೆನ್ನೈ: 2019ರ ಲೋಕಸಭಾ ಚುನಾವಣೆಯಲ್ಲಿ ಕೈಗೊಂಡಿದ್ದ ಸೂತ್ರವನ್ನೇ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಯು 2024ರ ಚುನಾವಣೆಯಲ್ಲೂ ಅಳವಡಿಸಿದೆ. ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ 10 ಕ್ಷೇತ್ರಗಳನ್ನು ಬಿಟ್ಟುಕೊಡಲು ಡಿಎಂಕೆ ತೀರ್ಮಾನಿಸಿದೆ.

ADVERTISEMENT

ದ್ರಾವಿಡ ಪಕ್ಷವು ಕಾಂಗ್ರೆಸ್‌ಗೆ ತಮಿಳುನಾಡಿನಲ್ಲಿ 9 ಮತ್ತು ಪುದುಚೇರಿಯಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಆ ಮೂಲಕ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಮತ್ತು ಡಿಎಂಕೆ ಅಂತಿಮಗೊಳಿಸಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಸೆಲ್ವಪೆರುಂತಾಗೈ ಅವರು ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್, ‘ತಮಿಳುನಾಡು ಹಾಗೂ ಪುದುಚೇರಿಯ ಎಲ್ಲಾ 40 ಸೀಟುಗಳನ್ನು ಕಾಂಗ್ರೆಸ್ ಮತ್ತು ಡಿಎಂಕೆ ಗೆಲ್ಲಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.