ADVERTISEMENT

ಲೋಕಸಭಾ ಚುನಾವಣೆ: ಅಂತಿಮ ಹಂತದ ಮತದಾನ, ಗಣ್ಯರಿಂದ ಹಕ್ಕು ಚಲಾವಣೆ

​ಪ್ರಜಾವಾಣಿ ವಾರ್ತೆ
Published 19 ಮೇ 2019, 9:10 IST
Last Updated 19 ಮೇ 2019, 9:10 IST
ಚಿತ್ರಗಳು: ಎಎನ್‌ಐ ಟ್ವಿಟರ್‌
ಚಿತ್ರಗಳು: ಎಎನ್‌ಐ ಟ್ವಿಟರ್‌   

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಭಾನುವಾರ ಆರಂಭವಾಗಿದೆ.

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ, ಪಂಜಾಬ್‌ ಸೇರಿದಂತೆ8 ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ.

ಪ್ರಧಾನಿ ಮೋದಿ, ಕೇಂದ್ರದ ಸಚಿವ ರವಿಶಂಕರ್‌ ಪ್ರಸಾದ್‌, ಶತ್ರುಘ್ನ ಸಿನ್ಹಾ ಸೇರಿದಂತೆ 918 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ADVERTISEMENT

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರುಗೋರಖಪುರದ 246ನೇ ಮತಗಟ್ಟೆಯಲ್ಲಿಮತದಾನ ಮಾಡಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪಟ್ನಾದ ರಾಜಭವನದ 326ನೇ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಪಂಜಾಬ್‌ನಲ್ಲಿ ಕ್ರಿಕೆಟ್‌ ಆಟಗಾರ ಹರ್ಭಜನ್‌ ಸಿಂಗ್‌ ಮತದಾನದ ಹಕ್ಕು ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.