
ಪ್ರಜಾವಾಣಿ ವಾರ್ತೆ
ನವದೆಹಲಿ: ವಿಮಾ ಕ್ಷೇತ್ರದಲ್ಲಿ ಶೇ 100ರಷ್ಟು ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.
‘ಸಬ್‌ಕಾ ವಿಮಾ ಸಬ್‌ಕಿ ರಕ್ಷಾ(ವಿಮಾ ಕಾಯ್ದೆಗಳ ತಿದ್ದುಪಡಿ) ಮಸೂದೆ,2025’ ಮಂಡಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,‘ಎಫ್‌ಡಿಐ ಹರಿವು ಹೆಚ್ಚಳಕ್ಕೆ ಅವಕಾಶ ಕಲ್ಪಿಸಿದಾಗ, ಹೆಚ್ಚು ವಿಮಾ ಕಂಪನಿಗಳು ಈ ಕ್ಷೇತ್ರ ಪ್ರವೇಶಿಸಲು ಸಾಧ್ಯವಾಗಲಿದೆ ಹಾಗೂ ಕೈಗೆಟುಕುವ ದರದಲ್ಲಿ ಎಲ್ಲರಿಗೂ ವಿಮಾ ಸೌಲಭ್ಯ ಸಿಗಲಿದೆ’ ಎಂದು ಹೇಳಿದರು.
‘ಈ ಕ್ಷೇತ್ರದಲ್ಲಿ ಏಕಸ್ವಾಮ್ಯ ಇದ್ದರೆ ನಮಗೆ ಹೆಚ್ಚು ಅನುಕೂಲ ಆಗುವುದಿಲ್ಲ. ಸ್ಪರ್ಧೆ ಹೆಚ್ಚಿದಷ್ಟೂ ಉತ್ತಮ ದರಕ್ಕೆ ವಿಮೆ ಸಿಗಲಿದೆ’ ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.