ವಿಮಾನ–
ಚೆನ್ನೈ: ಲಂಡನ್‌ಗೆ ಹೊರಟಿದ್ದ ಅಂತರರಾಷ್ಟ್ರೀಯ ವಿಮಾನ ತಾಂತ್ರಿಕ ಕಾರಣಗಳಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ವಾಪಸ್ ಮರಳಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ವಿಮಾನದಲ್ಲಿ ಸುಮಾರು 209 ಪ್ರಯಾಣಿಕರಿದ್ದರು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಾಪಸ್ ಬಂದಿದೆ ಎಂದು ಅವರು ವಿವರಿಸಿದರು
ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.