ADVERTISEMENT

ಲಂಡನ್‌– ಹೈದರಾಬಾದ್‌ ಮಾರ್ಗದ ಬ್ರಿಟಿಷ್‌ ಏರ್‌ವೇಸ್‌ ವಿಮಾನಕ್ಕೆ ಬಾಂಬ್ ಬೆದರಿಕೆ

ಪಿಟಿಐ
Published 23 ಡಿಸೆಂಬರ್ 2025, 14:41 IST
Last Updated 23 ಡಿಸೆಂಬರ್ 2025, 14:41 IST
   

ಹೈದರಾಬಾದ್‌: ಲಂಡನ್‌ನಿಂದ ಹೈದರಾಬಾದ್‌ಗೆ ಹೊರಟಿದ್ದ ಬ್ರಿಟಿಷ್‌ ಏರ್‌ವೇಸ್‌ ವಿಮಾನಕ್ಕೆ ಸೋಮವಾರ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಕೂಡಲೇ ವಿಮಾನವನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರಾಹಕರ ಸಹಾಯ ಕೇಂದ್ರಕ್ಕೆ ಬಾಂಬ್‌ ಬೆದರಿಕೆ ಮೇಲ್‌ ಕಳುಹಿಸಲಾಗಿತ್ತು ಎಂದು ತಿಳಿಸಿವೆ.

ವಿಮಾನ ಭೂಸ್ಪರ್ಶದ ವೇಳೆ ಅಗ್ನಿಶಾಮಕ ದಳದ ಸಜ್ಜು ಸೇರಿದಂತೆ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿತ್ತು ಎಂದು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.