ADVERTISEMENT

ಉತ್ತರ ಪ್ರದೇಶ: ಹನುಮಾನ್ ವಿಗ್ರಹ ಧ್ವಂಸ ಮಾಡಿದ ಕಿಡಿಗೇಡಿಗಳು

ಪಿಟಿಐ
Published 11 ಜನವರಿ 2025, 7:33 IST
Last Updated 11 ಜನವರಿ 2025, 7:33 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಐಸ್ಟಾಕ್ ಚಿತ್ರ

ಬಲ್ಲಿಯಾ: ಇಲ್ಲಿರುವ ಹನುಮಾನ್ ದೇಗುಲವೊಂದರ ಮೂರ್ತಿಯನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ಸಂಬಂಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ.

ADVERTISEMENT

ಸಿಕಂದರಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಗೋಲ್‌ ಬಜಾರ್‌ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೇವಸ್ಥಾನದಲ್ಲಿದ್ದ ಹನುಮಂತನ ವಿಗ್ರಹದ ಗದೆ ಮುರಿದು ಹೋಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ವಿಕಾಸ್ ಚಂದ್ರ ಪಾಂಡೆ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಹಾನಿಗೊಳಗಾದ ವಿಗ್ರಹವನ್ನು ಸರಿಪಡಿಸಿದ್ದಾರೆ.

ಸಿಕಂದರಪುರ ಪೊಲೀಸ್ ಹೊರಠಾಣೆ ಉಸ್ತುವಾರಿ ಜನ್ ಪ್ರಕಾಶ್ ತಿವಾರಿ ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.