ADVERTISEMENT

ಎಸ್‌ಪಿ–ಬಿಎಸ್‌ಪಿ ಮೈತ್ರಿಯಿಂದ ಹತಾಶೆಗೊಂಡಿರುವ ಬಿಜೆಪಿ: ಅಖಿಲೇಶ್‌ ಯಾದವ್‌

​ಪ್ರಜಾವಾಣಿ ವಾರ್ತೆ
Published 13 ಜನವರಿ 2019, 11:26 IST
Last Updated 13 ಜನವರಿ 2019, 11:26 IST
   

ಲಖನೌ:ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳಮೈತ್ರಿಯಿಂದಬಿಜೆಪಿನಾಯಕರು ಮತ್ತು ಕಾರ್ಯಕರ್ತರು ಹತಾಶರಾಗಿದ್ದು ಅವರು ಎಸ್‌ಪಿ ಮತ್ತು ಬಿಎಸ್‌ಪಿ ಸೇರಲು ಬಯಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಭಾನುವಾರ ಟ್ವೀಟ್ ಮಾಡಿದ್ದಾರೆ.

ಅಖಿಲೇಶ್‌ ಯಾದವ್‌ ಮತ್ತು ಮಾಯಾವತಿಶನಿವಾರ ಜಂಟಿ ಮಾಧ್ಯಮ ಗೋಷ್ಠಿ ನಡೆಸಿ ಮಹಾಮೈತ್ರಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದರು. ಉಭಯ ಪಕ್ಷಗಳು ತಲಾ 38 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವ,ರಾಯ್‌ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಅವರು ಹೇಳಿದ್ದರು.

ಎಸ್‌ಪಿ–ಬಿಎಸ್‌ಪಿ ತಮ್ಮ ಅಸ್ತಿತ್ವದ ಉಳಿವಿಗಾಗಿ ಕೈಜೋಡಿಸಿವೆಯೇ ಹೊರತು ದೇಶದ ಒಳಿತಾಗಿ ಅಲ್ಲ. ಮೋದಿ ಅವರನ್ನು ಎದುರಿಸಲು ಸಾಧ್ಯವಾಗದೆ ಮೈತ್ರಿ ಮಾಡಿಕೊಂಡಿವೆ ಎಂದು ಬಿಜೆಪಿ ಟೀಕೆ ಮಾಡಿತ್ತು.

ADVERTISEMENT

ಮಹಾಮೈತ್ರಿ ಕುರಿತಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯಾನಾಥ್ ಮತ್ತು ಬಿಜೆಪಿ ನಾಯಕರ ಟೀಕೆಗಳಿಗೆ ಟ್ವೀಟ್‌ ಮೂಲಕ ಟಾಂಗ್ ಕೊಟ್ಟಿರುವ ಅಖಿಲೇಶ್‌ ಯಾದವ್‌ ‘ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿಯಿಂದ ಬಿಜೆಪಿಯ ಮುಂಚೂಣಿ ನಾಯಕರುಮತ್ತು ಇಡೀ ಪಕ್ಷವೇ ಭರವಸೆಯನ್ನು ಕಳೆದುಕೊಂಡಿದೆ, ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರು ನಮ್ಮ ಬೂತ್ ಬಂದ್‌ ಆಗಿದೆ ಎಂದು ಹೇಳುತ್ತಿದ್ದಾರೆ. ಹತಾಶೆಗೆ ಒಳಗಾಗಿರುವ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಸ್‌ಪಿ ಮತ್ತು ಬಿಎಸ್‌ಪಿ ಕಡೆ ಮುಖ ಮಾಡುತ್ತಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ನನ್ನ ಪ್ರಕಾರ ಎಸ್‌ಪಿ ಮತ್ತು ಬಿಎಸ್‌ಪಿಗೆ ಒಳ್ಳೆ ದಿನಗಳ ಬರಲಿವೆ, ಮಾಯಾವತಿಯವರನ್ನು ಅವಮಾನ ಮಾಡಿದ್ದ ಬಿಜೆಪಿಯವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಮಾಯಾವತಿ ಅವರು ಮೈತ್ರಿಯ ನಿರ್ಧಾರ ಮಾಡಿದ್ದು ಒಂದು ಐತಿಹಾಸಿಕ ಘಟ್ಟ.ಬಿಜೆಪಿಯನ್ನು ಸೋಲಿಸಿ ಅವರ ಆಡಳಿತವನ್ನು ಕೊನೆಗಾಣಿಸುವುದು ನಮ್ಮ ಗುರಿಯಾಗಿದೆ ಎಂದುಅಖಿಲೇಶ್‌ ಯಾದವ್‌ ಶನಿವಾರಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.