ADVERTISEMENT

ದ್ವೇಷದಿಂದ ತಂದೆಯನ್ನು ಕಳೆದುಕೊಂಡ ನಾನು ದೇಶ ಕಳೆದುಕೊಳ್ಳಲು ಬಯಸಲ್ಲ: ರಾಹುಲ್

'ಭಾರತ್‌ ಜೋಡೊ ಯಾತ್ರೆ’ಗೆ ಚಾಲನೆ

ಪಿಟಿಐ
Published 7 ಸೆಪ್ಟೆಂಬರ್ 2022, 13:24 IST
Last Updated 7 ಸೆಪ್ಟೆಂಬರ್ 2022, 13:24 IST
ತಮಿಳುನಾಡಿನ ಶ್ರೀಪೆರಂಬೂದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು.
ತಮಿಳುನಾಡಿನ ಶ್ರೀಪೆರಂಬೂದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು.   

ನವದೆಹಲಿ: ‘ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನನ್ನ ತಂದೆಯನ್ನು (ರಾಜೀವ್ ಗಾಂಧಿ) ಕಳೆದುಕೊಂಡಿದ್ದೇನೆ. ಆದರೆ, ಅದಕ್ಕಾಗಿ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್‌ ಹಮ್ಮಿಕೊಂಡಿರುವ ‘ಭಾರತ್‌ ಜೋಡೊ ಯಾತ್ರೆ’ಗೆ ಬುಧವಾರ ಚಾಲನೆ ನೀಡುವ ಮುನ್ನ ರಾಹುಲ್ ಗಾಂಧಿ, ತಮಿಳುನಾಡಿನ ಶ್ರೀಪೆರಂಬೂದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಕುರಿತು ವಿಡಿಯೊ ಮತ್ತು ಫೋಟೊಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ‘ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಾಗಿ ನಾವು ಜಯ ಸಾಧಿಸುತ್ತೇವೆ’ ಎಂದು ಹೇಳಿದ್ದಾರೆ.

ADVERTISEMENT

3,570 ಕಿ.ಮೀ. ಸಂಚರಿಸಲಿರುವ ‘ಭಾರತ್‌ ಜೋಡೊ’ ಯಾತ್ರೆಯು ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ, ರಾಜಕೀಯ ಕೇಂದ್ರೀಕರಣ ಸೇರಿದಂತೆ ದೇಶವನ್ನು ಬಾಧಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಪಕ್ಷ ಹೇಳಿದೆ.

ರಾಹುಲ್‌ ಗಾಂಧಿ ಅವರಿಗೆ ಹಲವು ರಾಜ್ಯಗಳ ಕಾಂಗ್ರೆಸ್‌ ನಾಯಕರು ಸಾಥ್‌ ನೀಡಿದ್ದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.