ADVERTISEMENT

ಕೋವಿಡ್‌ ಲಸಿಕೆ: ನ. 3 ರಂದು ಪ್ರಧಾನಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2021, 10:12 IST
Last Updated 31 ಅಕ್ಟೋಬರ್ 2021, 10:12 IST
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ   

ನವದೆಹಲಿ: ಕೋವಿಡ್‌ ಲಸಿಕೆಯ ನೀಡಿಕೆಯು ಕಡಿಮೆಯಿರುವ 40 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್‌ 3 ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಭಾನುವಾರ ಹೇಳಿದೆ.

ಕೋವಿಡ್‌ ಲಸಿಕೆ ಮೊದಲ ಡೋಸ್‌ ನೀಡಿಕೆ ಪ್ರಮಾಣ ಶೇ 50ಕ್ಕಿಂತ ಕಡಿಮೆ ಇರುವ ಮತ್ತು ಲಸಿಕೆಯ ಎರಡನೇ ಡೋಸ್‌ ಕಡಿಮೆ ಪ್ರಮಾಣದಲ್ಲಿ ನೀಡಿರುವ ಜಿಲ್ಲೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಾರ್ಖಂಡ್‌, ಮಣಿಪುರ, ನಾಗಾಲ್ಯಾಂಡ್‌, ಅರುಣಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಮೇಘಾಲಯಗಳಲ್ಲಿನ 40 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಈ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಜಿ 20 ಶೃಂಗಸಭೆ ಮತ್ತು ಸಿಒಪಿ 26 ಸಭೆಗಳಲ್ಲಿ ಭಾಗವಹಿಸಿ ವಿದೇಶದಿಂದ ಹಿಂತಿರುಗಿದ ತಕ್ಷಣ ಪ್ರಧಾನಿ ಮೋದಿ ಈ ಸಭೆ ನಡೆಸಲಿದ್ದಾರೆ ಎಂದು ಪಿಎಂಒ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.