ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾನುವಾರ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.1ರಷ್ಟು ದಾಖಲಾಗಿದೆ.
ಭೂಕಂಪನದ ಕೇಂದ್ರವು ಪಂಜಾಬಿ ಬಾಗ್ ಪ್ರದೇಶದಲ್ಲಿ 7 ಕಿ.ಮೀ ಆಳದಲ್ಲಿದ್ದು, ಮಧ್ಯಾಹ್ನ 12.02 ಗಂಟೆಗೆ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಮಾಪನ ಅಧ್ಯಯನ ಕೇಂದ್ರ ತಿಳಿಸಿದೆ.
ಈ ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಕುರಿತು ವರದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.