ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಲಘುಭೂಕಂಪ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2022, 10:43 IST
Last Updated 10 ಫೆಬ್ರುವರಿ 2022, 10:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಲಘು ಭೂಕಂಪ ಸಂಭವಿಸಿದ್ದು, ಕಣಿವೆಯ ಪ್ರಸಿದ್ಧ ಪ್ರವಾಸಿ ತಾಣ ಗುಲ್‌ಮಾರ್ಗ್‌,ಬಂಡಿಪೋರಾ, ಸೋಪುರೆ, ಗಂದರ್‌ಬಲ್‌, ರಾಜೌರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಂಪನದ ಅನುಭವ ಉಂಟಾಗಿದ್ದು, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

‘ಗುರುವಾರ ಮಧ್ಯಾಹ್ನ 12.25ಕ್ಕೆ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಿಲ್ಗಿಟ್‌ ಬಾಲಿಸ್ತಾನ್‌ ಎಂಬ ಪ್ರದೇಶದ 20 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಭೂಕಂಪನದ ತೀವ್ರತೆಯು ರಿಕ್ಟರ್‌ ಮಾಪಕದಲ್ಲಿ 3.8 ದಾಖಲಾಗಿದೆ. ಭೂಕಂಪನದ ಕೇಂದ್ರಬಿಂದು ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಗುಲ್‌ಮಾರ್ಗ್‌ನಿಂದ 96 ಕಿ.ಮೀ ದೂರದಲ್ಲಿ ಕಂಡು ಬಂದಿದೆ’ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT