ನವದೆಹಲಿ : ದೆಹಲಿಯಲ್ಲಿ ಸೋಮವಾರ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.1 ರಷ್ಟು ತೀವ್ರತೆ ದಾಖಲಾಗಿದೆ.
ದೆಹಲಿ–ಗುರುಗ್ರಾಮ ಗಡಿಯಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಈ ಪ್ರಾಕೃತಿಕ ವಿದ್ಯಮಾನ, ಮಧ್ಯಾಹ್ನ 1 ಗಂಟೆಗೆ 18 ಕಿ.ಮೀ. ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಸಂಸ್ಥೆ ತಿಳಿಸಿದೆ.
ಏಪ್ರಿಲ್ನಿಂದ ಈವರೆಗೆ ದೆಹಲಿಯಲ್ಲಿ 14 ಬಾರಿ ಲಘು ಭೂಕಂಪ ಸಂಭವಿಸಿದೆ ಎಂದು ಸಂಸ್ಥೆ ತಿಳಿಸಿದೆ.ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.