ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಗುರುವಾರ ವಾಯುಭಾರ ಕುಸಿತು ಉಂಟಾಗಿದ್ದು, ಇದು ಚಂಡಮಾರುತವಾಗಿ ಪರಿವರ್ತನೆಯಾಗಿ ಶನಿವಾರದ ಹೊತ್ತಿಗೆ ತಮಿಳುನಾಡಿನ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಮುಂದಿನ ಮೂರು ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಆಂಧ್ರ ಪ್ರದೇಶದ ದಕ್ಷಿಣ ಭಾಗಗಳತ್ತ ಚಂಡಮಾರುತ ಸಾಗಲಿದೆ ಎಂದು ಇಲಾಖೆ ಹೇಳಿದೆ.
ನ.20 ಮತ್ತು 21ರ ವೇಳೆಗೆ ತಮಿಳುನಾಡು, ಪುದುಚೇರಿ, ಕರೈಕಲ್‌ನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ನ.21ರ ಹೊತ್ತಿಗೆ ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯಲ್ಲೂ ಸಾಧಾರಣ ಮಳೆಯಾಗಬಹುದು ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.