ADVERTISEMENT

ವಾಯುಭಾರ ಕುಸಿತ; ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: ಐಎಂಡಿ ಮುನ್ಸೂಚನೆ

ಪಿಟಿಐ
Published 22 ಅಕ್ಟೋಬರ್ 2022, 11:15 IST
Last Updated 22 ಅಕ್ಟೋಬರ್ 2022, 11:15 IST
.
.   

ಭುವನೇಶ್ವರ: ಉತ್ತರ ಅಂಡಮಾನ್‌ನ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪಶ್ಚಿಮ ಬಂಗಾಳದ ಸಾಗರ ದ್ವೀಪದ ಆಗ್ನೇಯ ದಿಕ್ಕಿನ ಸಮುದ್ರದಲ್ಲಿ ಇದೇ 24ರಂದು ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ವಾಯವ್ಯ ಬಂಗಾಳ ಕೊಲ್ಲಿಯ ಕಡೆಗೆ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಒಡಿಶಾ ಹಾಗೂ ಕರಾವಳಿ ಪ್ರದೇಶ ಇರುವ ಕೆಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹೇಳಿದೆ.

ಒಡಿಶಾ ಕರಾವಳಿ ಮತ್ತು ಬಂಗಾಳಕೊಲ್ಲಿಯಲ್ಲಿ ಮೀನುಗಾರರು ಆಳಸಮುದ್ರಕ್ಕೆ ತೆರಳದಂತೆ ಐಎಂಡಿ ಎಚ್ಚರಿಕೆ ನೀಡಿದೆ.

ADVERTISEMENT

ಒಡಿಶಾದ ಪುರಿ, ಬಾಲೇಶ್ವರ, ಕಟಕ್‌, ಖುರ್ದಾ ಮೊದಲಾದೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಸ್ಥಳೀಯ ಹವಾಮಾನ ಕೇಂದ್ರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.