
ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮವಾಗಿ ಚೆನ್ನೈ, ತಿರುವಲ್ಲೂರು, ಕಾಂಚೀಪುರಂ, ಕಡಲೂರು ಸೇರಿದಂತೆ ತಮಿಳುನಾಡಿನ ಹಲವೆಡೆ ಸೋಮವಾರವೂ ಸಾಧಾರಣ ಮಳೆಯಾಗಿದೆ.
ದಿತ್ವಾ ಚಂಡಮಾರುತವು ದುರ್ಬಲಗೊಂಡಿದ್ದು, ಅದರ ಪರಿಣಾಮವಾಗಿ ವಾಯುಭಾರ ಕುಸಿತವಾಗಿದೆ. ಇದು ತಮಿಳುನಾಡು–ಪಾಂಡಿಚೇರಿ ಕರಾವಳಿಗೆ ಸಮೀಪವಾಗಿರುವುದರಿಂದ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೃಷಿಭೂಮಿಗೆ ಹಾನಿಯಾಗಿದೆ.
ಚೆನ್ನೈನಿಂದ ಪೋರ್ಟ್‌ಬ್ಲೇರ್‌ಗೆ ಹೋಗಬೇಕಾಗಿದ್ದ 10 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಚೆನ್ನೈ ವಿಮಾನ ನಿಲ್ದಾಣ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಂಗಾಚಿಮಾಡಂನಲ್ಲಿ 200 ಮನೆಗಳು ಜಲಾವೃತಗೊಂಡಿವೆ. ರಾಮೇಶ್ವರಂನಲ್ಲಿಯೂ ಜನ ಸಂಕಷ್ಟದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.