ADVERTISEMENT

ಸಬ್ಸಿಡಿ ರಹಿತ ಎಲ್‌ಪಿಜಿ ದರ ₹100 ಇಳಿಕೆ

ಪಿಟಿಐ
Published 1 ಜುಲೈ 2019, 6:32 IST
Last Updated 1 ಜುಲೈ 2019, 6:32 IST
   

ನವದೆಹಲಿ: ಸಬ್ಸಿಡಿಯೇತರ ಅಡುಗೆ ಅನಿಲದ (ಎಲ್‌ಪಿಜಿ) ಪ್ರತಿ ಸಿಲಿಂಡರ್ ಬೆಲೆಯನ್ನು ₹ 100ರಂತೆ ತಗ್ಗಿಸಲಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಅಗ್ಗವಾಗಿರುವುದರಿಂದ ಬೆಲೆ ಕಡಿತ ಮಾಡಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ) ತಿಳಿಸಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್‌ ಬೆಲೆ ₹ 737.50 ರಿಂದ₹ 637ಕ್ಕೆ ಇಳಿದಿದೆ.

ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.ಗೃಹ ಬಳಕೆಗೆ ಒಂದು ಕುಟುಂಬಕ್ಕೆ ವಾರ್ಷಿಕ 12 ಸಿಲಿಂಡರ್‌ಗಳನ್ನು (ಸಬ್ಸಿಡಿ ಸಹಿತ) ಸರ್ಕಾರ ವಿತರಿಸುತ್ತದೆ. ಸಬ್ಸಿಡಿ ಮೊತ್ತವನ್ನು ನೇರವಾಗಿ ಖಾತೆದಾರರ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.