ADVERTISEMENT

ಜಲಿಯನ್‌ ವಾಲಾಬಾಗ್‌ ಮಸೂದೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 20:15 IST
Last Updated 2 ಆಗಸ್ಟ್ 2019, 20:15 IST
   

ನವದೆಹಲಿ: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರನ್ನು ಟ್ರಸ್ಟಿ ಸ್ಥಾನದಿಂದ ತೆಗೆದುಹಾಕುವ ‘ಜಲಿಯನ್‌ವಾಲಾಬಾಗ್‌ ರಾಷ್ಟ್ರೀಯ ಸ್ಮಾರಕ (ತಿದ್ದುಪಡಿ) ಮಸೂದೆ’ಯನ್ನು ಲೋಕಸಭೆಯಲ್ಲಿ ವಿರೋಧಪಕ್ಷಗಳ ಭಾರಿ ಪ್ರತಿಭಟನೆಯ ನಡುವೆ ಶುಕ್ರವಾರ ಅಂಗೀಕರಿಸಲಾಯಿತು.

ಮಸೂದೆ ವಿರೋಧಿಸಿ ಕಾಂಗ್ರೆಸ್‌ ಸಭಾತ್ಯಾಗ ನಡೆಸಿತು. ತಿದ್ದುಪಡಿ ಮೂಲಕ, ಕಾಂಗ್ರೆಸ್‌ ಅಧ್ಯಕ್ಷರಿಗೆ ಟ್ರಸ್ಟ್‌ ನಲ್ಲಿ ಸಹಜವಾಗಿ ಟ್ರಸ್ಟಿಯಾಗಲು ಇದ್ದ ಅವಕಾಶ ರದ್ದುಪಡಿಸಲಾಗಿದೆ. ಇದರ ಬದಲು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಟ್ರಸ್ಟಿಯಾಗಲು ಅವ ಕಾಶ ಕಲ್ಪಿಸಲಾಗಿದೆ. ಆದರೆ ಸಂಖ್ಯಾಬಲ ಕೊರತೆಯಿಂದ ಸದ್ಯ ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕನೇ ಇಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.