ADVERTISEMENT

ಲೋಕಸಭಾ ಚುನಾವಣೆ | ಪಂಜಾಬ್: ಫಿರೋಜ್‌ಪುರ ಕಾಂಗ್ರೆಸ್ ಅಭ್ಯರ್ಥಿಯಾಗಿ ಘುಬಾಯ

ಪಿಟಿಐ
Published 7 ಮೇ 2024, 10:36 IST
Last Updated 7 ಮೇ 2024, 10:36 IST
ಕಾಂಗ್ರೆಸ್‌ ಪಕ್ಷದ ಬಾವುಟ ಹಾಗೂ ನರೇಂದ್ರ ಮೋದಿ
ಕಾಂಗ್ರೆಸ್‌ ಪಕ್ಷದ ಬಾವುಟ ಹಾಗೂ ನರೇಂದ್ರ ಮೋದಿ   

ಚಂಡಿಗಢ: ಫಿರೋಜ್‌ಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೇರ್ ಸಿಂಗ್ ಘುಬಾಯ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಪಂಜಾಬ್‌ನ ಎಲ್ಲಾ 13 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಘುಬಾಯ ಅವರು 2009ರ ಲೋಕಸಭಾ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳದ ಟಿಕೆಟ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಕಾಲಿದಳದಲ್ಲಿದ್ದಾಗ ಜಲಾಲಾಬಾದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಲೋಕಸಭಾ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯ ಘಟಕದ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರಿಗೆ ಘುಬಾಯ ಧನ್ಯವಾದ ತಿಳಿಸಿದ್ದಾರೆ.

ADVERTISEMENT

ಎಎಪಿಯ ಜಗದೀಪ್ ಸಿಂಗ್ ಕಾಕಾ ಬ್ರಾರ್ ಮತ್ತು ಶಿರೋಮಣಿ ಅಕಾಲಿದಳದ ನರದೇವ್ ಸಿಂಗ್ ಬಾಬಿ ಮಾನ್ ವಿರುದ್ಧ ಘುಬಯಾ ಕಣಕ್ಕಿಳಿದಿದ್ದಾರೆ.

ಪ್ರಸ್ತುತ ಫಿರೋಜ್‌ಪುರ ಕ್ಷೇತ್ರವನ್ನು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಪ್ರತಿನಿಧಿಸುತ್ತಿದ್ದು, ಈ ಬಾರಿ ಸ್ಪರ್ಧಿಸದಿರಲು ಅವರು ನಿರ್ಧರಿಸಿದ್ದಾರೆ.

ಪಂಜಾಬ್‌ನ 13 ಕ್ಷೇತ್ರಗಳಿಗೆ ಜೂನ್ 1ರಂದು ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.