ADVERTISEMENT

ಅಯೋಧ್ಯೆ: ರಾಮನ ದರ್ಶನ ಪಡೆದ ಸ್ಪೀಕರ್ ಓಂಬಿರ್ಲಾ, ರಾಜಸ್ಥಾನ CM ಭಜನ್‌ಲಾಲ್ ಶರ್ಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2024, 4:45 IST
Last Updated 11 ಮಾರ್ಚ್ 2024, 4:45 IST
<div class="paragraphs"><p>ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು&nbsp;ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ&nbsp; ಭೇಟಿ ನೀಡಿದ್ದಾರೆ.</p></div>

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ  ಭೇಟಿ ನೀಡಿದ್ದಾರೆ.

   

ಅಯೋಧ್ಯೆ (ಉತ್ತರ ಪ್ರದೇಶ): ಬಿಜೆಪಿ ದೇಶದಾದ್ಯಂತ ಹಮ್ಮಿಕೊಂಡಿರುವ ಅಯೋಧ್ಯೆಯ ಶ್ರೀರಾಮ ಮಂದಿರ ದರ್ಶನ ಅಭಿಯಾನದಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು (ಸೋಮವಾರ) ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಬಾಲರಾಮನ ದರ್ಶನ ಪಡೆದಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಸಂಪುಟ ಸಚಿವರೊಂದಿಗೆ ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ADVERTISEMENT

‘ಇಂದು ಅಯೋಧ್ಯೆಗೆ ಆಗಮಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಈ ಹಿಂದೆ ನಾನು ಟೆಂಟ್‌ನಲ್ಲಿ ರಾಮನ ದರ್ಶನ ಪಡೆದಿದ್ದೆ. ಇಂದು ಭವ್ಯ ಮಂದಿರದಲ್ಲಿ ದರ್ಶನ ಪಡೆಯುತ್ತಿರುವುದು ಸಂತಸ ಮೂಡಿಸಿದೆ. ಇಂತಹ ಭವ್ಯವಾದ ಮಂದಿರವನ್ನು ನಿರ್ಮಿಸಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳುತ್ತೇನೆ’ ಎಂದು ಭಜನ್‌ಲಾಲ್ ಶರ್ಮಾ ತಿಳಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಇದರ ಪರಿಣಾಮವಾಗಿ ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ನೂಕು ನುಗ್ಗಲು ಮತ್ತು ಉದ್ದನೆಯ ಸರತಿ ಸಾಲುಗಳು ಇತ್ತೀಚೆಗೆ ಕಂಡುಬಂದಿತ್ತು.

ರಾಮ ಮಂದಿರಕ್ಕೆ ವಿವಿಐಪಿ ಮತ್ತು ವಿಐಪಿಗಳು ಭೇಟಿ ನೀಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದ್ದು, ನೂಕು ನುಗ್ಗಲು ಉಂಟಾಗಲಿದೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ, ಭದ್ರತಾ ವಿವರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಪ್ರತಿಯೊಬ್ಬರಿಗೂ ಸುಗಮ ದರ್ಶನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಮಾರ್ಚ್‌ವರೆಗೆ ತಮ್ಮ ಅಯೋಧ್ಯೆ ಭೇಟಿಯನ್ನು ಮುಂದೂಡುವಂತೆ ಮೋದಿಯವರು ಸಚಿವ ಸಂಪುಟದ ಸಭೆಯಲ್ಲಿ ಪ್ರಸ್ತಾಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.