ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಮಮಂದಿರ ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮದ ದೊಡ್ಡ ಪರಂಪರೆಯಾಗಿದೆ ಎಂದು ಬಣ್ಣಿಸಿದ್ದಾರೆ. ಈ ಪವಿತ್ರ ದೇವಾಲಯ ಶತಮಾನಗಳ ತ್ಯಾಗ, ಹೋರಾಟ ಮತ್ತು ಭಕ್ತಿಯಿಂದ ನಿರ್ಮಿತವಾಗಿದೆ ಎಂದು ಹೇಳಿದ್ದಾರೆ.
ಇಂದಿನಿಂದ (ಶನಿವಾರ) ಆರಂಭವಾಗಿರುವ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರದವರೆಗೂ ನಡೆಯಲಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಮಲಲ್ಲಾ ಮೂರ್ತಿಗೆ ಅಭಿಷೇಕ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಹಾ ಆರತಿ ಬೆಳಗಿ ದೇವರಿಗೆ 56 ತಿನಿಸುಗಳನ್ನು ಅರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.