ADVERTISEMENT

ರಾಷ್ಟ್ರದ ಅಭಿವೃದ್ಧಿಯಲ್ಲಿ ಉತ್ತರ ಪ್ರದೇಶ ಪ್ರಮುಖ ಪಾತ್ರ ವಹಿಸಿದೆ: ನಾಯ್ಡು

ಪಿಟಿಐ
Published 24 ಜನವರಿ 2021, 8:46 IST
Last Updated 24 ಜನವರಿ 2021, 8:46 IST
ಎಂ. ವೆಂಕಯ್ಯ ನಾಯ್ಡು
ಎಂ. ವೆಂಕಯ್ಯ ನಾಯ್ಡು   

ನವದೆಹಲಿ: ರಾಷ್ಟ್ರದ ಅಭಿವೃದ್ಧಿಯಲ್ಲಿ ಉತ್ತರ ಪ್ರದೇಶ ರಾಜ್ಯವು ಪ್ರಮುಖ ಪಾತ್ರ ವಹಿಸಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಉತ್ತರ ಪ್ರದೇಶದ ಸ್ಥಾಪನಾ ದಿನದ ಅಂಗವಾಗಿ ಶುಭಾಶಯ ಕೋರಿದ್ದಾರೆ.

‘ಶ್ರೀಮಂತ ಇತಿಹಾಸ, ಕಠಿಣ ಕೆಲಸ ಮಾಡುವ ಜನರು ಮತ್ತು ರೋಮಾಂಚಕ ಸಂಸ್ಕೃತಿಗೆ ಹೆಸರುವಾಸಿಯಾದ ಉತ್ತರ ಪ್ರದೇಶ ರಾಷ್ಟ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ರಾಜ್ಯವು ಸಮೃದ್ಧಿಯಾಗಲಿ’ ಎಂದು ಉಪರಾಷ್ಟ್ರಪತಿ ಸಚಿವಾಲಯವು ನಾಯ್ಡು ಅವರನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದೆ.

ADVERTISEMENT

ಪ್ರತಿ ವರ್ಷ ಜನವರಿ 24ರಂದು ಉತ್ತರ ಪ್ರದೇಶ ಸ್ಥಾಪನಾ ದಿನವಾಗಿ ಆಚರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.