ADVERTISEMENT

ಮದರಸಾದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಾಯ; ಧರ್ಮಗುರು ಬಂಧನ

ಪಿಟಿಐ
Published 5 ಜುಲೈ 2025, 3:06 IST
Last Updated 5 ಜುಲೈ 2025, 3:06 IST
   

ಲಖನೌ: ಉತ್ತರ ಪ್ರದೇಶದ ಮೀರತ್‌ನ ಮದರಸಾವೊಂದರಲ್ಲಿ 22 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ ಆರೋಪದಡಿ ಧರ್ಮಗುರು ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದ ನಿವಾಸಿಯಾಗಿರುವ ಸಂತ್ರಸ್ತೆ, ಧರ್ಮಗುರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಮತ್ತು ತಾನು ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಆ ಕೃತ್ಯಕ್ಕೆ ಆರೋಪಿಯ ಪತ್ನಿಯು ಕುಮ್ಮಕ್ಕು ನೀಡಿದ್ದಾಳೆ. ಈ ಸಂಬಂಧ ನನಗೆ ಹಲವು ಬಾರಿ ಬೆದರಿಕೆ ಹಾಕಿದ್ದಾಳೆ ಎಂದೂ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ADVERTISEMENT

ಪೊಲೀಸರ ಪ್ರಕಾರ, ಮಹಿಳೆ ಮೂರು ವರ್ಷಗಳ ಹಿಂದೆ ಸೆಮಿನರಿಗೆ ಬಂದಿದ್ದರು.

ಮೀರತ್ ನಗರ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್ ಮಾತನಾಡಿ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಸಂತ್ರಸ್ತೆಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.