ADVERTISEMENT

ಮಧ್ಯಪ್ರದೇಶ: ಮತಾಂತರ ತಡೆ ಮಸೂದೆಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 14:41 IST
Last Updated 8 ಮಾರ್ಚ್ 2021, 14:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಭೋಪಾಲ್‌ (ಪಿಟಿಐ): ಧಾರ್ಮಿಕ ಮತಾಂತರ ತಡೆ ಮಸೂದೆಗೆ ಮಧ್ಯಪ್ರದೇಶ ವಿಧಾನಸಭೆ ಸೋಮವಾರ ಧ್ವನಿ ಮತದ ಮೂಲಕ ಅನುಮೋದನೆ ನೀಡಿದೆ.

ಡಿಸೆಂಬರ್‌ನಲ್ಲಿ ಸಚಿವ ಸಂಪುಟವು ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು.

ಮಾರ್ಚ್‌ 1ರಂದು ರಾಜ್ಯ ಗೃಹ ಸಚಿವ ನರೋತ್ತಮ ಮಿಶ್ರಾ ಅವರು ‘ಧಾರ್ಮಿಕ ಸ್ವಾತಂತ್ರ್ಯ ಮಸೂದೆ–2021’ ಅನ್ನು ಸದನದಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಧ್ವನಿ ಮತದ ಮೂಲಕ ಮಸೂದೆಗೆ ಸೋಮವಾರ ಅಂಗೀಕಾರ ನೀಡಲಾಯಿತು.

ADVERTISEMENT

ವಂಚನೆ ಅಥವಾ ಬಲವಂತರ ವಿವಾಹದ ಮೂಲಕ ಧಾರ್ಮಿಕ ಮತಾಂತರವಾಗುವುದನ್ನು ತಡೆಯಲು ಈ ಕಾಯ್ದೆ ರೂಪಿಸಲಾಗಿದೆ.

ತಪ್ಪಿತಸ್ಥರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು ಅಪಾರ ದಂಡ ವಿಧಿಸುವ ಅವಕಾಶವನ್ನು ಸುಗ್ರೀವಾಜ್ಞೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಸುಗ್ರೀವಾಜ್ಞೆ ಜಾರಿಗೊಳಿಸಿದ ಕೇವಲ ಒಂದು ತಿಂಗಳಲ್ಲಿ 23 ಪ್ರಕರಣಗಳನ್ನು ದಾಖಲಿಸಲಾಗಿತ್ತು ಎಂದು ಗೃಹ ಸಚಿವ ಮಿಶ್ರಾ ಕಳೆದ ತಿಂಗಳು ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.