ADVERTISEMENT

Madhya Pradesh Polls: ದಿಮಾನಿ ವಿಧಾನಸಭೆ ಕ್ಷೇತ್ರದಲ್ಲಿ ಕಲ್ಲು ತೂರಾಟ

ಏಜೆನ್ಸೀಸ್
Published 17 ನವೆಂಬರ್ 2023, 5:53 IST
Last Updated 17 ನವೆಂಬರ್ 2023, 5:53 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ದಿಮಾನಿ ವಿಧಾನಸಭೆ ಕ್ಷೇತ್ರದ ಮಿರ್ಘಾನ್‌ ಗ್ರಾಮದ ಮತಗಟ್ಟೆ 147–148ರಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ.

ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

ADVERTISEMENT

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ಬೆಳಿಗ್ಗೆ 7ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5ರ ವರೆಗೆ ನಡೆಯಲಿದೆ. ಬೆಳಿಗ್ಗೆ 9ರ ಹೊತ್ತಿಗೆ ಶೇ 11ರಷ್ಟು ಮತದಾನವಾಗಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.