ADVERTISEMENT

ಮಧ್ಯಪ್ರದೇಶ ಉಪಚುನಾವಣೆ: ಸಿಂಧಿಯಾ, ಕಮಲನಾಥ್‌ ಪ್ರತಿಷ್ಠೆ ಪಣಕ್ಕೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 12:57 IST
Last Updated 9 ನವೆಂಬರ್ 2020, 12:57 IST
ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಕಮಲ್‌ ನಾಥ್‌
ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಕಮಲ್‌ ನಾಥ್‌   

ಭೋಪಾಲ್‌: ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶವು ಮಂಗಳವಾರ ಹೊರ ಬೀಳಲಿದೆ.

ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ ಅವರ ಬೆಂಬಲಿಗ 24 ಶಾಸಕರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಸರಳ ಬಹುಮತಕ್ಕಾಗಿ (133) ಬಿಜೆಪಿಯು ಕನಿಷ್ಠ ಎಂಟು ಸ್ಥಾನಗಳನ್ನು ಗೆಲ್ಲಬೇಕಿದೆ.

ಈ ಉಪ ಚುನಾವಣೆಯು ಮಾಜಿ ಮುಖ್ಯಮಂತ್ರಿ ಕಮಲನಾಥ್‌ ಹಾಗೂ ಸಿಂಧಿಯಾ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ.

ADVERTISEMENT

‘ಉಪ ಚುನಾವಣೆ ನಡೆದ 19 ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 8ರಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಬಳಿ ಹೆಚ್ಚು ಜನ ಸೇರುವಂತಿಲ್ಲ. ಅಭ್ಯರ್ಥಿ,ಪೋಲ್‌ ಏಜೆಂಟ್‌ ಮತ್ತು ಕೌಂಟಿಂಗ್‌ ಏಜೆಂಟ್‌ ಮಾತ್ರ ಎಣಿಕೆ ಕೇಂದ್ರದಲ್ಲಿ ಹಾಜರಿರಬಹುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.