ADVERTISEMENT

ಮಧ್ಯಪ್ರದೇಶ BJP ಸರ್ಕಾರದ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಿದ ಕಾಂಗ್ರೆಸ್‌

ಕಾಂಗ್ರೆಸ್‌ ಮಂಡಿಸಿದ ಅವಿಶ್ವಾಸ ನಿರ್ಣಯ ಅಂಗೀಕರಿಸಿದ ಸ್ಪೀಕರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಡಿಸೆಂಬರ್ 2022, 9:05 IST
Last Updated 21 ಡಿಸೆಂಬರ್ 2022, 9:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭೋಪಾಲ್‌: ಮಧ್ಯಪ್ರದೇಶದ ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್‌, ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡಿಸಿದೆ. ಕಾಂಗ್ರೆಸ್‌ ನೀಡಿದ ಗೊತ್ತುವಳಿಯನ್ನು ವಿಧಾನಸಭೆ ಸ್ಪೀಕರ್‌ ಅಂಗೀಕರಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಗೋವಿಂದ್‌ ಸಿಂಗ್ ಅವರು ಗೊತ್ತುವಳಿಯನ್ನು ಮಂಡಿಸಿದ್ದಾರೆ.

‌ಕಾಂಗ್ರೆಸ್‌ನ ಗೊತ್ತುವಳಿ ಬಗ್ಗೆ ಚರ್ಚೆ ಮಾಡಲು ಸಿದ್ಧ ಎಂದು ಗೃಹ ಸಚಿವರೂ ಆಗಿರುವ ಸಂಸದೀಯ ವ್ಯವಹಾರಗಳ ಸಚಿವ ನರೋತ್ತಮ ಮಿಶ್ರಾ ಅವರು ಹೇಳಿದರು. ಇದರ ಬೆನ್ನಲ್ಲೇ ಗೊತ್ತುವಳಿ ನಿರ್ಣಯವನ್ನು ಸ್ಪೀಕರ್‌ ಗೋವಿಂದ್‌ ಸಿಂಗ್‌ ಅವರು ಅಂಗೀಕರಿಸಿದ್ದಾರೆ.

ADVERTISEMENT

ಈ ಸಂಬಂಧ ಸದನದಲ್ಲಿ ಚರ್ಚೆಗಳೂ ಅರಂಭವಾಗಿದೆ.

ಬಿಜೆಪಿ ಸರ್ಕಾರವು ಎಲ್ಲಾ ಹಂತಗಳಲ್ಲಿ ವಿಫಲವಾಗಿದೆ. ಹೀಗಾಗಿ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡನೆ ಮಾಡುತ್ತೇವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಕಮಲ್‌ನಾಥ್‌ ಬುಧವಾರ ಬೆಳಿಗ್ಗೆ ಹೇಳಿದ್ದರು.

ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕು ಎಂದು ಕಾಂಗ್ರೆಸ್‌ ತನ್ನ ಶಾಸಕರಿಗೆ ವಿಪ್‌ ಜಾರಿ ಮಾಡಿದೆ.

230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 127 ಶಾಸಕರನ್ನು ಹಾಗೂ ಕಾಂಗ್ರೆಸ್‌ 96 ಶಾಸಕರನ್ನು ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.