ADVERTISEMENT

ಕುಡಿದ ಅಮಲಿನಲ್ಲಿ 8 ವರ್ಷದ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ತಂದೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 11:01 IST
Last Updated 14 ಡಿಸೆಂಬರ್ 2019, 11:01 IST
   

ನವದೆಹಲಿ: ಪ್ರಚೋದಿತ ಸ್ಥಿತಿಯಲ್ಲಿದ್ದ ತಂದೆ 8 ವರ್ಷದ ತನ್ನ ಪುತ್ರಿ ಮೇಲೆಯೇ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಪಟ್ಟಣದಲ್ಲಿ ನಡೆದಿದೆ.

ಮಕ್ಕಳ ಸಹಾಯವಾಣಿ ಸೇವೆಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ದೂರು ಸಲ್ಲಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಸಂಜೆಯ ಸಮಯದಲ್ಲಿ ಕುಡಿದ ಸ್ಥಿತಿಯಲ್ಲಿರುವ ವ್ಯಕ್ತಿ ಪ್ರತಿದಿನ ತನ್ನ ಮಗಳನ್ನು ಹೊಡೆಯುತ್ತಾನೆ ಎಂದು ಕರೆ ಮಾಡಿದವರು ನಮಗೆ ತಿಳಿಸಿದರು. ಬಳಿಕ ಅಧಿಕಾರಿಗಳು ಸಂತ್ರಸ್ತೆಯನ್ನು ಹುಡುಕಲು ಮುಂದಾದಾಗ ಅದಾದ ಎರಡು ದಿನಗಳ ಬಳಿಕ ಸಂತ್ರಸ್ತೆಯನ್ನು ಆಕೆಯ ನಿವಾಸದಲ್ಲಿ ಪತ್ತೆಹಚ್ಚಿದ್ದಾರೆ ಎಂದು ಪೊಲೀಸ್ ಮುಖ್ಯ ಸೂಪರಿಂಟೆಂಡೆಂಟ್ ರಾಕೇಶ್ ಮೋಹನ್ ಶುಕ್ಲಾ ತಿಳಿಸಿದ್ದಾರೆ.

ADVERTISEMENT

ಬಾಲಕಿಯು ನಡೆದಿದ್ದನ್ನೆಲ್ಲ ಮಕ್ಕಳ ಸಮಾಲೋಚಕರ ಬಳಿ ಹೇಳಿಕೊಂಡಿದ್ದು, ಅವರು ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗಅತ್ಯಾಚಾರವಾಗಿರುವುದು ತಿಳಿದುಬಂದಿದೆ.

ಕಾರ್ಮಿಕನಾಗಿರುವ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತ ತನಿಖೆಗೆ ನ್ಯಾಯಾಧೀಶರು ವಿಶೇಷ ತನಿಖಾ ತಂಡವನ್ನು ನೇಮಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.