ADVERTISEMENT

ಮಧ್ಯಪ್ರದೇಶ |ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್‌ ಉರುಳಿ 9 ಮಂದಿ ಸಾವು

ಪಿಟಿಐ
Published 2 ಅಕ್ಟೋಬರ್ 2025, 15:19 IST
Last Updated 2 ಅಕ್ಟೋಬರ್ 2025, 15:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಂದೋರ್‌: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್‌ ಕೆರೆಗೆ ಉರುಳಿ 9 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಖಾಂಡವಾ ಜಿಲ್ಲೆಯಲ್ಲಿ ನಡೆದಿದೆ. 

ಹಲವು ಗ್ರಾಮಗಳ ದುರ್ಗಾ ಮೂರ್ತಿಗಳನ್ನು ವಿಜಯದಶಮಿಯಂದು ವಿಸರ್ಜಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳಿದಾಗ ಪಂಧನಾ ಪ್ರದೇಶದಲ್ಲಿ ಗುರುವಾರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು. 

ADVERTISEMENT

ಐದಾರು ಮಂದಿ ಬದುಕುಳಿದಿದ್ದಾರೆ. ಕಾರ್ಯಾಚರಣೆ ನಡೆಸಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆ ಕುರಿತು ತನಿಖೆ ಪ್ರಾರಂಭಿಸಲಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.