ಸಾಂದರ್ಭಿಕ ಚಿತ್ರ
ದೇವಸ: ಮಧ್ಯಪ್ರದೇಶದ ದೇವಸ ಜಿಲ್ಲೆಯ ಹಾಲಿನ ಪಾರ್ಲರ್‌ಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ನಯಾಪುರ ಪ್ರದೇಶದ ಹಾಲಿನ ಪಾರ್ಲರ್‌ಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಇಂದು (ಶನಿವಾರ) ಬೆಳಗಿನ ಜಾವ 4.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು ಎಂದು ನಹರ್ ದರ್ವಾಜ ಪೊಲೀಸ್ ಠಾಣೆಯ ಪ್ರಭಾರಿ ಮಂಜು ಯಾದವ್ ತಿಳಿಸಿದ್ದಾರೆ.
ಅವಘಡದಲ್ಲಿ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ಉಸಿರುಗಟ್ಟಿ ಮತ್ತು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ತಕ್ಷಣ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.