ADVERTISEMENT

ಮಧ್ಯಪ್ರದೇಶ: 25 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಡಿಸೆಂಬರ್ 2023, 2:03 IST
Last Updated 6 ಡಿಸೆಂಬರ್ 2023, 2:03 IST
<div class="paragraphs"><p>ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ</p></div>

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ

   

ಭೋಪಾಲ್: ಮಧ್ಯಪ್ರದೇಶದ ರಾಜಗಢದಲ್ಲಿ 25 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಮಗುವನ್ನು ರಕ್ಷಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್‌ಡಿಆರ್‌ಎಫ್‌) ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಗುವನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮಂಗಳವಾರ ಸಂಜೆ 5.30ರ ಸುಮಾರಿಗೆ ರಾಜಗಢದ ಪಿಪ್ಲಿಯಾ ರಸೋಡಾ ಗ್ರಾಮದಲ್ಲಿ ಮಗು ಕೊಳವೆ ಬಾವಿಗೆ ಬಿದ್ದಿರುವುದು ತಿಳಿದುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ರಕ್ಷಣಾ ಸಿಬ್ಬಂದಿ ಸತತ ಒಂಬತ್ತು ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ರಾಜಗಢ ಎಸ್‌ಪಿ ಧರ್ಮರಾಜ್ ಸಿಂಗ್ ಮೀನಾ, ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್, ಶಾಸಕ ಮೋಹನ್ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.