ADVERTISEMENT

ಕೋವಿಡ್ ಲಸಿಕೆ ಪಡೆದು ಅಸ್ವಸ್ಥರಾದ ನಾಲ್ವರು ಬಾಲಕಿಯರು, ಸದ್ಯ ಆರೋಗ್ಯ ಸ್ಥಿರ

ಪಿಟಿಐ
Published 25 ಮಾರ್ಚ್ 2022, 7:08 IST
Last Updated 25 ಮಾರ್ಚ್ 2022, 7:08 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸತ್ನಾ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ವಿರುದ್ಧದ ಲಸಿಕೆಯನ್ನು ಪಡೆದ 12 ರಿಂದ 14 ವರ್ಷದೊಳಗಿನ ನಾಲ್ವರು ಬಾಲಕಿಯರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸದ್ಯ ಇವರೆಲ್ಲರ ಪರಿಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್‌ಒ) ಡಾ. ಅಶೋಕ್ ಕುಮಾರ್ ಅವ್ಧಿಯಾ ತಿಳಿಸಿದ್ದಾರೆ.

ಆಮ್ದಾರಾ ಪ್ರಾಥಮಿಕ ಕೇಂದ್ರದಲ್ಲಿ ಗುರುವಾರ 12 ರಿಂದ 14 ವರ್ಷದೊಳಗಿನ ಸುಮಾರು 50 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. ಇವರಲ್ಲಿ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದ ನಾಲ್ವರು ತಲೆತಿರುಗಿ ಬಿದ್ದಿದ್ದಾರೆ. ಬಹುಶಃ ಭಯದಿಂದಲೇ ಹೀಗಾಗಿರಬಹುದು ಎಂದು ತಿಳಿಸಿದ್ದಾರೆ.

ADVERTISEMENT

ಕೂಡಲೇ ನಾಲ್ವರನ್ನು ಮೈಹರ್ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಸತ್ನಾದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರೆಲ್ಲರೂ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದಾರೆ.

ಘಟನೆ ಬಗ್ಗೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ತನಿಖೆಗೆ ಸೂಚಿಸಿದೆ.

12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ವಿರುದ್ಧದ ಲಸಿಕೆ ನೀಡುವ ಅಭಿಯಾನ ಬುಧವಾರದಿಂದ ಮಧ್ಯಪ್ರದೇಶದಲ್ಲಿ ಆರಂಭಿಸಲಾಗಿದೆ. ಈ ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.